Text content
Prayer song
ತಾಯಿ ಶಾರದೆ ಲೋಕ ಪೂಜಿತೆ
ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ
ನೀಡು ಸನ್ಮತಿ ಸೌಕ್ಯದಾತೆ
ಅಂಧಕಾರವ ಓಡಿಸು
ಜ್ಞಾನಜ್ಯೋತಿಯ ಬೆಳಗಿಸು
ಹೃಧಯ ಮಂದಿರದಲ್ಲಿ ನೆಲೆಸು
ಚಿಂತೆಯ ಅಳಿಸು
ಶಾಂತಿಯ ಉಳಿಸು
ನಿನ್ನ ಮಡಿಲಿನ ಮಕ್ಕಳಮ್ಮ
ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ
ಬಾಳನು ಬೆಳಗಮ್ಮ
ನಮ್ಮ ಕೋರಿಕೆ ಆಲಿಸಮ್ಮ
ಒಳ್ಳೆ ಮಾತುಗಲಾಡಿಸು
ಒಳ್ಳೆ ಕೆಲಸವ ಮಾಡಿಸು
ಒಳ್ಳೆ ದಾರಿಯಲೆಮ್ಮ ನಡೆಸು
ವಿದ್ಯೆಯ ಕಲಿಸು
ಆಸೆ ಪೂರೈಸು
State Anthem
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ !
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ ದಿವ್ಯಾರಣ್ಯ ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ ಕುಮಾರವ್ಯಾಸರ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ ನಾನಕ ರಾಮಾ ನಂದ ಕಬೀರರ
ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನೆಚ್ಚಿನ ಬೀಡೆ ಕೃಷ್ಣ ಶರಾವತಿ ತುಂಗಾ,
ಕಾವೇರಿಯ ವರ ರಂಗಾ ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ! ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
National Anthem
Pledge
India is my country; all Indians are my brothers and sisters.
I love my country, and I am proud of its rich and varied heritage.
I shall always strive to be worthy of it.
I shall respect my parents, teachers and all elders
And treat everyone with courtesy.
To my country and my people, I pledge my devotion.
In their well being and prosperity lies my happiness.
Jai Hind
Afternoon/Lunch Prayer
Annapoorne Sadapoorne
Shankara Pranavallabhe
Gnana Vyragya Sidhyartham
Bhiksham Dehicha Parvathi
Evening Prayer
Oh my God!
I thank you for my lessons today
Bless my father, bless my mother
Bless my country and bless me
Make me a good child and take me home safely.